Thursday, June 4, 2026
Homeಕರಾವಳಿಬೆಳ್ತಂಗಡಿ ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಪ್ರಸನ್ನ ನಿಧನ

ಬೆಳ್ತಂಗಡಿ ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಪ್ರಸನ್ನ ನಿಧನ

- Advertisement -
- Advertisement -

ಬೆಳ್ತಂಗಡಿ: ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಆಗಿ ಬೆಳ್ತಂಗಡಿ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಪ್ರಸನ್ನ(37) ಅವರು ಅಲ್ಪಕಾಲದ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ವಿಧಿವಶರಾಗಿದ್ದಾರೆ.

2018 ನವೆಂಬರ್ ನಿಂದ ಅವರು ಮಂಗಳೂರು ಘಟಕದ ಬೆಳ್ತಂಗಡಿ ವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಎರಡು ತಿಂಗಳಿಂದ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ,

ಮೂಲತಃ ದಾವಣಗೆರೆಯವರಾದ ಅವರು 2009ರಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಜನಸ್ನೇಹಿ ಅಧಿಕಾರಿಯಾಗಿದ್ದ ಅವರು  ತಂದೆ ತಾಯಿ, ಪತ್ನಿ  ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!