Saturday, June 6, 2026
HomeUncategorizedದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

- Advertisement -
- Advertisement -

ಸುಬ್ರಮಣ್ಯ; ಕರಾವಳಿ ಹಾಗೂ ಪಶ್ಚಿಮಘಟ್ಟಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಪರಿಣಾಮ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಕುಮಾರಧಾರಾ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಏರಿಕೆಯಾಗಿದೆ.ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದೆ.

ಕುಮಾರಧಾರಾ ನದಿ ತುಂಬಿ ಹರಿಯುತ್ತಿರೋದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲದೇ  ಕುಮಾರಧಾರಾ ಕಿಂಡಿ ಅಣೆಕಟ್ಟು ಸಂಪೂರ್ಣ ಜಲಾವೃತವಾಗಿದೆ. ಈಗಾಗಲೇ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದ್ದು, ಅವರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿ ತೀರದಲ್ಲಿ ಕುಕ್ಕೆ‌ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕುಮಾರಧಾರಾ ನದಿಯ ಉಪನದಿ ದರ್ಪಣತೀರ್ಥ ಕೂಡ ಮೈತುಂಬಿ ಹರಿಯುತ್ತಿದೆ.

- Advertisement -

Latest News

error: Content is protected !!