- Advertisement -
![]()
- Advertisement -
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ 7.8 ಮೀಟರ್ ಗೆ ಹೆಚ್ಚಳವಾಗಿದೆ.
ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪಾಣೆಮಂಗಳೂರಿನ ಆಲಡ್ಕ ಎಂಬಲ್ಲಿ ಮೈದಾನಕ್ಕೆ ನದಿ ನೀರು ನುಗ್ಗಿದೆ.
ನೀರು ನುಗ್ಗಿರುವ ಕಾರಣ ಮೈದಾನ ಸಂಪೂರ್ಣವಾಗಿ ಜಲಾವೃತವಾಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಆಲಡ್ಕದ ಸುಮಾರು 10 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.
ಅಲ್ಲದೇ ನೇತ್ರಾವತಿ ನದಿ ರಭಸವಾಗಿ ಹರಿಯುತ್ತಿರುವ ಕಾರಣ ನದಿ ತೀರದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
- Advertisement -


