- Advertisement -
![]()
- Advertisement -
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ದಿನಗಳೆದಂತೆ ಹೆಚ್ಚಾಗುತ್ತಿದ್ದು, ಇದು ಎಲ್ಲರಲ್ಲಿಯೂ ಆತಂಕವನ್ನು ಉಂಟುಮಾಡಿದೆ. ಪಾಣೆಮಂಗಳೂರಿನ ಆಲಡ್ಕ ತಗ್ಗುಪ್ರದೇಶದಲ್ಲಿರುವ ಮನೆ ಹಾಗೂ ಶೆಡ್ ಗಳಿಗೆ ನೀರು ನುಗ್ಗಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ

ಇಲ್ಲಿ ಪ್ರತಿ ವರ್ಷ ನದಿಯಲ್ಲಿ 8.5 ಮೀ ನೀರಿನ ಮಟ್ಟ ಏರಿಕೆಯಾದ ಕೂಡಲೇ ಹತ್ತಿರದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಇನ್ನು ಇವತ್ತು ಈದ್ ಹಬ್ಬ ವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಇಲ್ಲಿನ ಮನೆಗಳ ಸಾಮಾಗ್ರಿಗಳನ್ನು ರಾತ್ರಿಯೇ ಖಾಲಿ ಮಾಡಲಾಗಿದೆ. ಮನೆಮಂದಿಯನ್ನು ಸುರಕ್ಷಿತ ಮನೆಗಳಿಗೆ ಸ್ಥಳಾಂತರ ಮಾಡಲಾಗಿದೆ.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದಂತೆ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. ನದಿ ತೀರದ ಜನರು ಹೆಚ್ಚು ಜಾಗರೂಕತೆಯಿಂದ ಇರುವಂತೆ ಎಚ್ಚರಿಸಿ, ನೀರು ನುಗ್ಗುವಂತ ಜಾಗದ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಕು.ವಿಜೇತ, ಸಿಬ್ಬಂದಿ ಸದಾಶಿವ ಕೈಕಂಬ, ರೂಪೇಶ್ ಬೆಂಜನಪದವು ಉಪಸ್ಥಿತರಿದ್ದರು.


- Advertisement -


