Monday, May 6, 2024
Homeತಾಜಾ ಸುದ್ದಿಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಸೂಕ್ತ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ...

ಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಸೂಕ್ತ ಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

spot_img
- Advertisement -
- Advertisement -

ಬೆಳಗಾವಿ: ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ ಹೆಬ್ಬಾಳ್ಕರ್, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಕೂಡಾ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಂದು ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿವೆ.

- Advertisement -
spot_img

Latest News

error: Content is protected !!