Friday, June 5, 2026
Homeಪ್ರಮುಖ-ಸುದ್ದಿಗುಜರಾತ್, ಉತ್ತರ ಪ್ರದೇಶದ ಮಾದರಿ ಕಾನೂನನ್ನು ಕರ್ನಾಟಕದಲ್ಲಿಯೂ ಜಾರಿಗೆ ತರುತ್ತೇವೆ: ನಳಿನ್ ಕುಮಾರ್ ಕಟೀಲ್

ಗುಜರಾತ್, ಉತ್ತರ ಪ್ರದೇಶದ ಮಾದರಿ ಕಾನೂನನ್ನು ಕರ್ನಾಟಕದಲ್ಲಿಯೂ ಜಾರಿಗೆ ತರುತ್ತೇವೆ: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಹುಬ್ಬಳ್ಳಿಯಲ್ಲಿ ಗಲಭೆ ಸೃಷ್ಟಿಸಿರುವ ಮತಾಂಧರ ಹಿಂದಿರುವ ಶಕ್ತಿಯಾವುದೆಂದು ತನಿಖೆ ಮಾಡುತ್ತೇನೆ. ಗುಜರಾತ್, ಉತ್ತರ ಪ್ರದೇಶದ ಮಾದರಿ ಕಾನೂನನ್ನು ಕರ್ನಾಟಕದಲ್ಲಿಯೂ ಜಾರಿಗೆ ತರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಅವರು, ಸೋಶಿಯಲ್ ಮೀಡಿಯಾದ ವಿವಾದಾತ್ಮಕ ಕಾರಣ ಮುಂದಿಟ್ಟು ಮತಾಂಧರು ಗಲಭೆ ಸೃಷ್ಟಿಸಿದ್ದಾರೆ ಎಂದರು.

ಇನ್ನು ಸೋಶಿಯಲ್ ಮೀಡಿಯಾದ ಪೋಸ್ಟ್ ಮಾಡಿರುವ ಕಾರಣ ಇಟ್ಟುಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಸೃಷ್ಟಿಸಲಾಗಿದ್ದು, ಮತಾಂಧರು ಶಾಂತಿ, ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಣ್ಣ ಸಣ್ಣ ವಿಷಯಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -

Latest News

error: Content is protected !!