Saturday, June 6, 2026
Homeತಾಜಾ ಸುದ್ದಿನಾನು ಮತ್ತು ಡಿ.ಕೆ.ಶಿವಕುಮಾರ್ ಒಟ್ಟಾಗಿದ್ದೇವೆ: ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ- ಸಿದ್ದರಾಮಯ್ಯ

ನಾನು ಮತ್ತು ಡಿ.ಕೆ.ಶಿವಕುಮಾರ್ ಒಟ್ಟಾಗಿದ್ದೇವೆ: ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ- ಸಿದ್ದರಾಮಯ್ಯ

- Advertisement -
- Advertisement -

ದಾವಣಗೆರೆ: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಬಿರುಕಿದೆ ಎಂದು ತಪ್ಪು ಮಾಹಿತಿಯನ್ನು ಜನರಿಗೆ ನೀಡುವ ಕಾರ್ಯವನ್ನು ಸಾಕಷ್ಟು ಜನ ಮಾಡುತ್ತಿದ್ದಾರೆ. 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲು ಡಿಕೆಶಿ ವಿರೋಧ ಇದೆ ಎಂದು ಬಿಂಬಿಸುತ್ತಿದ್ದಾರೆ. ಇದು ಅವರ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಸಮಾರಂಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ನಮ್ಮ ಮುಂದಿರುವ ಏಕೈಕ ಸವಾಲು ರಾಜ್ಯದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಹಾಗೂ ಕೋಮುವಾದಿ ಸರ್ಕಾರವನ್ನು ತೊಲಗಿಸುವುದು. ರಾಹುಲ್ ಗಾಂಧಿ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಆಶಯ. ಇದಕ್ಕೆ ಜನರ ಆಶೀರ್ವಾದ ಬೇಕು. ನಾನು 44 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ. ಈಗಿರುವ ಬಿಜೆಪಿ ಸರ್ಕಾರದಂಥ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿರಲಿಲ್ಲ ಎಂದರು.

- Advertisement -

Latest News

error: Content is protected !!