Thursday, June 4, 2026
Homeತಾಜಾ ಸುದ್ದಿರಾಜ್ಯದ ಎಲ್ಲ 224 ಕ್ಷೇತ್ರದಲ್ಲಿಯೂ ನಾವು ಸ್ಪರ್ಧಿಸುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದ ಎಲ್ಲ 224 ಕ್ಷೇತ್ರದಲ್ಲಿಯೂ ನಾವು ಸ್ಪರ್ಧಿಸುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ರಾಜ್ಯದ ಎಲ್ಲ 224 ಕ್ಷೇತ್ರದಲ್ಲಿಯೂ ನಾವು ಸ್ಪರ್ಧಿಸುತ್ತೇವೆ. ನವೆಂಬರ್ 1ರಂದು 126 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತೇವೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.

ಜೆಡಿಎಸ್‌ಗೆ ಚುನಾವಣಾ ಅಭ್ಯರ್ಥಿಗಳಿಲ್ಲ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮಗೆ ಅಭ್ಯರ್ಥಿಗಳಿಲ್ಲ ಎಂದಾದರೆ ಬಿಜೆಪಿ ಮತ್ತು ಕಾಂಗ್ರೆಸ್ನವರು ನಮ್ಮ ನಾಯಕರ ಮನೆಬಾಗಿಲು ಬಡಿಯುತ್ತಿರುವುದೇಕೆ’ ಎಂದು ಪ್ರಶ್ನಿಸಿದರು. ಬೇರೆ ಪಕ್ಷಕ್ಕೆ ನಮ್ಮ ಪಕ್ಷದಿಂದ ಹೋಗುವವರು ಯಾರೂ ಇಲ್ಲ. ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರುವವರ ಬಗ್ಗೆಯೂ ನಾನು ಏನೂ ಹೇಳುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

- Advertisement -

Latest News

error: Content is protected !!