- Advertisement -
![]()
- Advertisement -
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ ಕಿತ್ತೆಸೆಯುವುದಾಗಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ, ಟಿಎಂಸಿಯ 15 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದ್ದು, ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದು ಸೋಲನುಭವಿಸಿತ್ತು. ಈ ಹಿನ್ನಡೆಯ ಹೊರತಾಗಿಯೂ ಬಿಜೆಪಿ ವಿರುದ್ಧದ ರಾಜಕೀಯ ಹೋರಾಟ ಮುಂದುವರಿಯಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮಮತಾ ಬ್ಯಾನರ್ಜಿ ಅವರು ಹಾಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕ್ಯಾಮೆರಾದಲ್ಲಿ ಹಣ ಪಡೆಯುತ್ತಾ ಸಿಕ್ಕಿಬಿದ್ದ ವ್ಯಕ್ತಿಯನ್ನು ಸಿಎಂ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
- Advertisement -


