- Advertisement -
![]()
- Advertisement -
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಿನ್ನೆ ತಡರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹುಬ್ಬಳ್ಳಿ ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಪ್ರಚೋಧನೆ ಮತ್ತು ಗಲಭೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ ಗಲಾಟೆಗೆ ಪ್ರಚೋದನೆ ಕೊಟ್ಟವರನ್ನೂ ಬಂಧಿಸಲಾಗುವುದು. ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ. ಕಾನೂನಿನ ಪ್ರಕಾರ ಈ ಘಟನೆಯನ್ನು ನೋಡಬೇಕು ಎಂದು ಹೇಳಿದ್ದಾರೆ.
- Advertisement -


