Friday, May 17, 2024
Homeಇತರಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ : `ಯೆಲ್ಲೋ...

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ : `ಯೆಲ್ಲೋ ಅಲರ್ಟ್’ ಘೋಷಣೆ

spot_img
- Advertisement -
- Advertisement -

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗಲಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಆ. 23 ಮತ್ತು 24ರಂದು ಕರ್ನಾಟಕದ ಬಹುತೇಕ ಕಡೆ ಮಳೆಯ ತೀವ್ರತೆ ಹೆಚ್ಚಾಗಲಿದೆ. ಆಗಸ್ಟ್ 23 ಹಾಗೂ 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.


ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಈ 9 ಜಿಲ್ಲೆಗಳಲ್ಲಿ ಆ. 24ರವರೆಗೆ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

- Advertisement -
spot_img

Latest News

error: Content is protected !!