Monday, April 29, 2024
Homeಕರಾವಳಿಧರ್ಮಸ್ಥಳದಲ್ಲಿ  51ನೇ  ವರ್ಷದ ಉಚಿತ ಸಾಮೂಹಿಕ ವಿವಾಹ ; ಬುಧವಾರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ 201...

ಧರ್ಮಸ್ಥಳದಲ್ಲಿ  51ನೇ  ವರ್ಷದ ಉಚಿತ ಸಾಮೂಹಿಕ ವಿವಾಹ ; ಬುಧವಾರ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ 201 ಜೋಡಿ

spot_img
- Advertisement -
- Advertisement -

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಮದುವೆ ಮನೆಯ ಸಂಭ್ರಮ, ಸಡಗರ ಮನೆ ಮಾಡಿದೆ.ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.

ನಾಳೆ ಮಂಗಳವಾರ ಅವರ ದಾಖಲೆಗಳನ್ನೆಲ್ಲಾ ಪರಿಶೀಲಿಸಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುತ್ತದೆ. ಬುಧವಾರ ಸಂಜೆ 5 ಗಂಟೆಯಿಂದ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗಲಿದ್ದಾರೆ.

ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು, ಚಲನಚಿತ್ರ ನಟ ತೂಗುದೀಪ ದರ್ಶನ್ ಮೊದಲಾದ ಗಣ್ಯರು ಮಂಗಳಸೂತ್ರ  ವಿತರಿಸಲಿದ್ದಾರೆ. ವೇದ-ಮಂತ್ರ ಘೋಷ ಪಠಣದೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ನಡೆಯುತ್ತದೆ. ಬಳಿಕ ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ನೂತನ ದಂಪತಿ ಅವರ ಊರಿಗೆ ತೆರಳಲಿದ್ದಾರೆ.

ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದ್ದು ಪ್ರತಿವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳು ಧರ್ಮಸ್ಥಳದಲ್ಲಿ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!