Friday, April 26, 2024
Homeಕರಾವಳಿಉಡುಪಿಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ!: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ!: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

spot_img
- Advertisement -
- Advertisement -

ಬೆಂಗಳೂರು: ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಾಗಲಿದೆ. ಇದರೊಂದಿಗೆ ರಾಜ್ಯದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮತ್ತೆ ಬಿಗಿಯಾಗಿ ಜಾರಿಗೊಳ್ಳಲಿದೆ.‌

ಈಗಾಗಲೇ ಗಡಿ ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಅಳವಡಿಸಲಾಗಿದ್ದು, ವಾರಾಂತ್ಯದ ಕರ್ಫ್ಯೂ ಸೇರಿ ಮತ್ತಷ್ಟು ಬಿಗಿ ಕ್ರಮಗಳು ಜಾರಿಯಾಗಲಿವೆ.

- Advertisement -
spot_img

Latest News

error: Content is protected !!