ಸುಳ್ಯ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂರನೇ ವರ್ಷದ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ಸುಳ್ಯ ತಾಲೂಕಿನ ಬಾಳುಗೋಡು ಉಪ್ಪುಕಳ ನಿವಾಸಿ ವಿನುತಾ (20) ಎಂಬಾಕೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.
ವಿನುತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂರನೇ ವರ್ಷದ ನರ್ಸಿಂಗ್ ತರಬೇತಿ ಪಡೆಯುತ್ತಿದ್ದಳು. ರಾಜ್ಯದಲ್ಲಿ ಕೊರೊನಾ ವೈರಸ್ ಕಾಯಿಲೆ ಉಲ್ಬಣ ಹಿನ್ನೆಲೆ ನರ್ಸಿಂಗ್ ತರಬೇತಿಗೆ ರಜೆ ನೀಡಲಾಗಿದೆ. ಹೀಗಾಗಿ ಯುವತಿ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ ಎಂಟು ಗಂಟೆಗೆ ತನ್ನ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದಳು. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.