Sunday, June 7, 2026
Homeತಾಜಾ ಸುದ್ದಿಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ನಿಧನ

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ನಿಧನ

- Advertisement -
- Advertisement -

ಕೊಲ್ಕೋತಾ: ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ಇಂದು ತಡರಾತ್ರಿ ಕೊಲ್ಕೋತಾದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕಿಡ್ನಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಮಿತ್ರಾ ಅವರು ಕೊಲ್ಕೋತಾ ಆಸ್ಪತ್ರೆಗೆ ದಾಖಲಾಗಿದ್ದಾರೆ, ಜುಲೈ 30ರ ಮಧ್ಯರಾತ್ರಿ 1.30 ರ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನೂ ಮಿತ್ರಾ ಅವರಿಗೆ ಕೊರೋನಾ ಪರೀಕ್ಷೆ ಮಾಡಿಸಿದ್ದು ನೆಗೆಟಿವ್ ಬಂದಿದೆ, ಕಾಂಗ್ರೆಸ್ ನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಮಿತ್ರಾ ಬಂಗಾಳದ ಸೀಲ್ದಾಹ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿದ್ದರು.

- Advertisement -

Latest News

error: Content is protected !!