Thursday, June 4, 2026
Homeತಾಜಾ ಸುದ್ದಿಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಕರ್ ಎನ್ ಡಿಎ ಅಭ್ಯರ್ಥಿ

ಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಕರ್ ಎನ್ ಡಿಎ ಅಭ್ಯರ್ಥಿ

- Advertisement -
- Advertisement -

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಕರ್ ಆಯ್ಕೆಯಾಗಿದ್ದಾರೆ.

ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಧನ್ ಕರ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.

1989ರ ಲೋಕಸಭಾ ಚುನಾವಣೆಯಲ್ಲಿ ಜುಂಜ್ನು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಧನ್ ಕರ್ ಮೊದಲ ಬಾರಿಗೆ ರಾಜಕೀಯ ಜೀವನ ಪ್ರವೇಶಿಸಿದರು.

ಅಲ್ಲದೇ ಸುಪ್ರೀಂ ಕೋರ್ಟ್ ಮತ್ತು ರಾಜಸ್ಥಾನ ಹೈಕೋರ್ಟ್ ನಲ್ಲಿ ನ್ಯಾಯವಾದಿಯಾಗಿಯೂ ಜಗದೀಪ್ ಧನ್ ಕರ್ ಕೆಲಸ ಮಾಡಿದ್ದಾರೆ.

1990 ರಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಇಲಾಖೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಧನ್ ಕರ್, 1993 ರಲ್ಲಿ ರಾಜಸ್ಥಾನ ವಿಧಾನಸಭೆಗೆ ಕಿಶನ್ ಘರ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

- Advertisement -

Latest News

error: Content is protected !!