Sunday, June 7, 2026
HomeUncategorizedಪಕ್ಷ ಹಾಗೂ ವಿಪಕ್ಷಗಳ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ; ಯು.ಟಿ. ಖಾದರ್

ಪಕ್ಷ ಹಾಗೂ ವಿಪಕ್ಷಗಳ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ; ಯು.ಟಿ. ಖಾದರ್

- Advertisement -
- Advertisement -

ಮಂಗಳೂರು: ‘ಆಡಳಿತ ಪಕ್ಷ ಹಾಗೂ ವಿಪಕ್ಷಗಳು ತಮ್ಮ ವಿವಿಧ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ,’ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮನವಿ ಮಾಡಿದರು.

ಅವರು ಈ ಕುರಿತಂತೆ ಗುರುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿಸೆಂಬರ್ 9 ರಿಂದ 19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜನತೆ ಮುಖ್ಯವಾಗಿ ಉತ್ತರ ಕರ್ನಾಟಕದ ಭಾಗದ ಜನತೆಯ ಹಿತದೃಷ್ಟಿಯಿಂದ ಚರ್ಚೆ ಕಲಾಪ ನಡೆಸಬೇಕು,’ ಎಂದು ಹೇಳಿದರು.

ಬಿಸಿನೆಸ್ ಅಡ್ವೈಸರಿ ಕಮಿಟಿ ಸಭೆಯು ಡಿಸೆಂಬರ್ 9ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು, ಈ ಬಾರಿಯ ಅಧಿವೇಶನದ ಮುಖ್ಯಾಂಶಗಳ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

- Advertisement -

Latest News

error: Content is protected !!