Saturday, May 18, 2024
Homeಕರಾವಳಿಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಾಟ್ಸಾಪ್ ಗ್ರೂಪ್ ಅಡ್ಮಿನ್ ರಶೀದ್ ಕುಂಡಡ್ಕ ಬಂಧನ

ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಾಟ್ಸಾಪ್ ಗ್ರೂಪ್ ಅಡ್ಮಿನ್ ರಶೀದ್ ಕುಂಡಡ್ಕ ಬಂಧನ

spot_img
- Advertisement -
- Advertisement -

ಮಂಗಳೂರು, ಮೇ 13: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸಪ್ ಗ್ರೂಪ್ ನ ಅಡ್ಮಿನ್ ಆದ ರಶೀದ್ ಕುಂಡಡ್ಕ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಅಬ್ದುಲ್ ರಶೀದ್ ಕುಂಡಡ್ಕ, ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರ ಪ್ರಮುಖ ಆರೋಪಿ ಮುತ್ತಾಸಿಮ್ ತಸ್ಲೀಂ ಎಂಬಾತನ ಕೊಲೆ ಪ್ರಕರಣದಲ್ಲಿ ಸಿಲುಕಿರುವ ವ್ಯಕ್ತಿಯೊಬ್ಬನ ಹೆಸರನ್ನು ಪ್ರಕರಣದಿಂದ ತೆಗೆಸುತ್ತೇನೆ, ತನಗೆ ಪೊಲೀಸ್ ಅಧಿಕಾರಿಗಳ ಪರಿಚಯವಿದೆ ಎಂದು ಹೇಳಿ 20 ಲಕ್ಷ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದನು. ಅಲ್ಲದೇ 4 ಲಕ್ಷ ರೂ. ಸುಲಿಗೆ ಪಡೆದಿರುವುದಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರಶೀದ್‌ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈತ “ಕನಕ” ಎಂಬ ವಾಟ್ಸ್ಅಪ್ ಗ್ರೂಪ್ ನ ಅಡ್ಮಿನ್ ಮಾಡಿದ್ದು, ಈ ವಾಟ್ಸಪ್ ಗ್ರೂಪ್ ನಲ್ಲಿ ಸರ್ಕಾರಿ ಅಧಿಕಾರಿಗಳನ್ನು, ರಾಜಕೀಯ ವ್ಯಕ್ತಿ, ಮಾಧ್ಯಮದವರನ್ನು ಸೇರಿಸಿಕೊಂಡು ನಂತರ ತನ್ನ ವಾಟ್ಸಪ್ ಗ್ರೂಪ್ ನ ಹೆಸರನ್ನು ನಮೂದಿಸಿ ಕರೆ ಮಾಡಿ ತನ್ನ ಪರಿಚಯವನ್ನು ಮಾಡಿಕೊಂಡು, ಆ ಪರಿಚಯವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಗೆ ನಂಬಿಸಿ ಹಣವನ್ನು ಸುಲಿಗೆ ಮಾಡುತ್ತಿದ್ದನು. ಈತನ ವಿರುದ್ದ ಈ ಹಿಂದೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುತ್ತದೆ. ಅಲ್ಲದೇ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಕೂಡಾ ಇರುತ್ತದೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯ್ಕ್, ಪಿಎಸ್ಸೈ ಎಚ್.ಡಿ. ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!