Saturday, June 6, 2026
Homeಕರಾವಳಿಉಡುಪಿಉಡುಪಿ: ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್ ಇರುವುದಿಲ್ಲ: ಸಚಿವ ಸುನಿಲ್‌ ಕುಮಾರ್‌...

ಉಡುಪಿ: ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್ ಇರುವುದಿಲ್ಲ: ಸಚಿವ ಸುನಿಲ್‌ ಕುಮಾರ್‌ ವ್ಯಂಗ್ಯ

- Advertisement -
- Advertisement -

ಉಡುಪಿ: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಸುನಿಲ್ ಕುಮಾರ್ ದಕ್ಷಿಣದಲ್ಲಿ ಕಾಂಗ್ರೆಸ್ ಜೋಡೋ ನಡೆಯುತ್ತಿದ್ದರೆ, ಉತ್ತರದಲ್ಲಿ ಹಿರಿಯ ನಾಯಕರು ಕಾಂಗ್ರೆಸ್ ತೊರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿರುವ ಅವರು, ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ,ದೇಶ ಮುರಿದವರು ಭಾರತ ಜೋಡೋ ಹೇಗೆ ಮಾಡುತ್ತಾರೆ? ದೇಶ ಮುರಿದವರಿಗೆ ಭಾರತ್ ಜೋಡೋ ಮಾಡುವ ನೈತಿಕತೆ ಇಲ್ಲ.ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ ,ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕು. ದಕ್ಷಿಣದವರು ಯಾತ್ರೆ ಮುಗಿಸಿ ಉತ್ತರ ತಲುಪುವಾಗ ಅಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ವ್ಯಂಗ್ಯವಾಡಿದ್ರು.

- Advertisement -

Latest News

error: Content is protected !!