Thursday, June 4, 2026
Homeಕರಾವಳಿಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಇಬ್ಬರು ಮೃತ್ಯು

ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಕ್ಕಿ ಇಬ್ಬರು ಮೃತ್ಯು

- Advertisement -
- Advertisement -

ಉಳ್ಳಾಲ: ಚಿಕ್ಕಮಗಳೂರು ಮೂಲದ ಇಬ್ಬರು ಯುವಕರು ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಯ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ.

ಈ ಇಬ್ಬರು ಯುವಕರು ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನದ ಬಳಿಕ, ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆಯಲ್ಲಿ ಬಶೀರ್, ಸಲ್ಮಾನ್ ಹಾಗೂ ಸೈಫ್ ಆಲಿ (27) ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಆಗಲೇ ಸ್ಥಳೀಯ ಈಜುಗಾರರು ಸಲ್ಮಾನ್ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಬಶೀರ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಮೃತ ದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿ ಸೈಫುಲ್ಲಾ ಅವರು ಚೇತರಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!