Thursday, June 4, 2026
Homeಪ್ರಮುಖ-ಸುದ್ದಿತಾನ್ಯಾಕೆ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಯೋಗಿ ಆದಿತ್ಯನಾಥ್

ತಾನ್ಯಾಕೆ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಯೋಗಿ ಆದಿತ್ಯನಾಥ್

- Advertisement -
- Advertisement -

ಉತ್ತರ ಪ್ರದೇಶ: ಮುಖ್ಯಮಂತ್ರಿಯಾಗಿ ಎಲ್ಲರನ್ನು ಸಮಾನತೆಯಿಂದ ನೋಡಿದ್ದೇನೆ. ಆದರೆ ನಾನೋರ್ವ ಯೋಗಿಯಾಗಿ, ಹಿಂದೂವಾಗಿ ಮಸೀದಿ ನಿರ್ಮಾಣ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದ್ದೇ ಇದೀಗ ಮಸೀದಿ ನಿರ್ಮಾಣದ ಮಾತು ಕೇಳಿ ಬರ್ತಿದೆ. ಶಿಲಾನ್ಯಾಸದ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಹೊತ್ತಿದ್ದ ಮುಖ್ಯಮಂತ್ರಿ ಯೋಗಿ, ಮಸೀದಿ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರಾ ಅನ್ನೋ ಪ್ರಶ್ನೆ ಎದ್ದಿತ್ತು. ಇದಕ್ಕೆ ಸ್ವತಃ ಮುಖ್ಯಮಂತ್ರಿ ಯೋಗಿಯೇ ಉತ್ತರ ನೀಡಿದ್ದು, ನನ್ನ ನಿಲುವಿನಲ್ಲಿ ನನಗೆ ಗೊಂದಲವೂ ಇಲ್ಲ. ಯಾವುದೇ ಧರ್ಮ, ಜಾತಿ, ಪಂಥವನ್ನು ತಾರತಮ್ಯ ಮಾಡಿಲ್ಲ, ಮಾಡುವುದು ಇಲ್ಲ. ಮುಖ್ಯಮಂತ್ರಿಯಾಗಿ ಎಲ್ಲರನ್ನು ಸಮಾನತೆಯಿಂದ ನೋಡಿದ್ದೇನೆ. ಆದರೆ ನಾನೋರ್ವ ಯೋಗಿಯಾಗಿ, ಹಿಂದೂವಾಗಿ ಮಸೀದಿ ನಿರ್ಮಾಣ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದಿದ್ದಾರೆ.

- Advertisement -

Latest News

error: Content is protected !!