Saturday, June 6, 2026
Homeಕರಾವಳಿಉಡುಪಿಉಡುಪಿ; ಪತಿಯ ಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ

ಉಡುಪಿ; ಪತಿಯ ಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ

- Advertisement -
- Advertisement -

ಉಡುಪಿ; ಪತಿಯ ಮೇಲೆ ಪತ್ನಿ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಘಟನೆ ಕಟಪಾಡಿ ಸಮೀಪದ ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಾ ಮಡ್ಮಣ್ ನಿವಾಸಿ ಮುಹಮ್ಮದ್ ಆಸಿಫ್ ಎಂಬವರ ಮೇಲೆ ಪತ್ನಿ ಅಫ್ರೀನ್ ಎಂಬವರು ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ್ದಾರೆ ಎನ್ನಲಾಗಿದೆ.

ಸೆ.17ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!