- Advertisement -
- Advertisement -
ಮಂಗಳೂರು: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪ (40) ಬಂಧಿತ ಆರೋಪಿ. ಈತ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.
ಅಕ್ಟೋಬರ್ 12 ರಂದು ಆರೋಪಿ ಶಿವಲಿಂಗಪ್ಪ, ತನ್ನ ಹೆಂಡತಿ ಸೋನಾಲಿ ಎಂಬಾಕೆಯ ಮೇಲೆ ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
- Advertisement -


