Sunday, June 7, 2026
Homeಕರಾವಳಿಕಾಸರಗೋಡು: ಮಹಿಳೆಯ ಆತ್ಮಹತ್ಯೆ ಪ್ರಕರಣ; ಪತಿಯ ಬಂಧನ

ಕಾಸರಗೋಡು: ಮಹಿಳೆಯ ಆತ್ಮಹತ್ಯೆ ಪ್ರಕರಣ; ಪತಿಯ ಬಂಧನ

- Advertisement -
- Advertisement -

ಕಾಸರಗೋಡು: ಮಹಿಳೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿಯನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಮಡಿಕೈ ಏರಿಕುಳಂ ನಾರ ನಿವಾಸಿ ಜಯಪ್ರಕಾಶ್ (45) ಬಂಧಿತ. ತನ ಪತ್ನಿ ಷೀಜಾ (23) ಆ.19ರಂದು ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಘಟನೆಯ ಮರುದಿನದಿಂದ ಆರೋಪಿ ಜಯಪ್ರಕಾಶ್ ತಲೆಮರೆಸಿಕೊಂಡಿದ್ದ.ಷೀಜಾಳ ತವರುಮನೆಯವರು ಈ ಬಗ್ಗೆ ನೀಲೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಷೀಜಾ ಅವರಿಗೆ ಜಯಪ್ರಕಾಶ್‌ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಅದರಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!