- Advertisement -
- Advertisement -
ಕೊರೊನಾ ವೈರಸ್ ಹಿನ್ನಲೆಯಲ್ಲಿ ಕ್ರಿಕೆಟ್ ಸಂಪೂರ್ಣ ನಿಂತಿದೆ. ಕ್ರಿಕೆಟ್ ಆಟಗಾರರು ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಧೋನಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ.
ಧೋನಿ ನೋಡದೆ ಬೇಸರಗೊಂಡ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದಿದೆ. ಪತ್ನಿ ಸಾಕ್ಷಿ ಧೋನಿ ಫೋಟೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಧೋನಿ ಹಾಸಿಗೆ ಮೇಲೆ ಮಲಗಿದ್ದಾರೆ. ಧೋನಿ ಕಾಲು ಸಾಕ್ಷಿ ಮೈಮೇಲಿದೆ. ಸಾಕ್ಷಿ, ಧೋನಿ ಕಾಲ್ಬೆರಳನ್ನು ಕಚ್ಚುತ್ತಿದ್ದಾರೆ. ಈ ಫೋಟೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಸಾಕ್ಷಿ ಹಂಚಿಕೊಂಡಿದ್ದಾರೆ. ಫೋಟೋ ವೇಗವಾಗಿ ವೈರಲ್ ಆಗಿದೆ.
- Advertisement -