Thursday, November 12, 2026
Homeಅಪರಾಧಮಕ್ಕಳಾಗಿಲ್ಲವೆಂದು ಕಿರುಕುಳ ನೀಡುತ್ತಿದ್ದ ಗಂಡನನ್ನ ಚಾಕುವಿನಿಂದ ಚುಚ್ಚಿ ಕೊಂದ ಪತ್ನಿ

ಮಕ್ಕಳಾಗಿಲ್ಲವೆಂದು ಕಿರುಕುಳ ನೀಡುತ್ತಿದ್ದ ಗಂಡನನ್ನ ಚಾಕುವಿನಿಂದ ಚುಚ್ಚಿ ಕೊಂದ ಪತ್ನಿ

- Advertisement -
- Advertisement -

ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ಪತ್ನಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದ್ದು, ಪತ್ನಿ ಮಾಲಾಶ್ರೀ (35) ಕೊಲೆ ಆರೋಪಿಯಾಗಿದ್ದಾಳೆ. ಖಾಸಗಿ ಬ್ಯಾಂಕಿನ ಸಾಲ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ್, ಪ್ರತಿದಿನ ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ದಂಪತಿಗೆ ಮಕ್ಕಳಾಗಿರಲಿಲ್ಲ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಶೇಖರ್ ಆಗಾಗ ಪತ್ನಿಯೊಂದಿಗೆ ಗಲಾಟೆ ನಡೆಸಿ ಹಲ್ಲೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹಗಲಿನಲ್ಲಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಆತ, ರಾತ್ರಿ ಮದ್ಯದ ಅಮಲಿನಲ್ಲಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ನಿನ್ನೆ ರಾತ್ರಿಯೂ ಮದ್ಯ ಸೇವಿಸಿ ಮನೆಗೆ ಬಂದ ರಾಜಶೇಖರ್, ಮಕ್ಕಳ ವಿಚಾರವಾಗಿ ಮತ್ತೆ ಜಗಳ ಆರಂಭಿಸಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮಾಲಾಶ್ರೀ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತಿಯ ಎದೆಗೆ ಇರಿದಿದ್ದಾಳೆ. ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ರಾಜಶೇಖರ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!