Thursday, June 4, 2026
Homeಅಪರಾಧಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ; ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ; ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಇಲ್ಲಿನ ಬಗಲಗುಂಟೆಯ ಮಹಿಳೆಯೊಬ್ಬಳು ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ತನ್ನ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ಆಕೆಯು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಡೆದಿದೆ.

ಆತ್ಮಹತ್ಯೆಮಾಡಿಕೊಂಡ ಮಹಿಳೆ ಪಾವಘಡದ ಗುಂಡಾರನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ (33) ಎನ್ನಲಾಗಿದೆ. ಮಹಿಳೆ ತನ್ನ ಐದು ವರ್ಷದ ರೋಶಿಣಿಯನ್ನು ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಈ ಘಟನೆಯು ಭಾನುವಾರ ಸಂಜೆ ಘಟನೆ ನಡೆದಿದ್ದು, ಶೃತಿ ತನ್ನ ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ.

ಶೃತಿ ಅವರು ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

- Advertisement -

Latest News

error: Content is protected !!