- Advertisement -
- Advertisement -
ಕಡಬದಲ್ಲಿ ನರಹಂತಕ ಕಾಡಾನೆಯನ್ನು ಸೆರೆ ಹಿಡಿದ ಬೆನ್ನಲ್ಲೇ ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎನ್ನಲಾಗಿದೆ.
ಗುರುವಾರ ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದು ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಆದರೆ ಆನೆ ಅಲ್ಲಿಂದ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂರು ಸಾಕಾನೆಗಳನ್ನು ಪೇರಡ್ಕ ಬಳಿಯ ಶಿಬಿರದಿಂದ ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕಕ್ಕೆ ಕರೆದೊಯ್ದು ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿದೆ.
- Advertisement -