Thursday, June 4, 2026
Homeತಾಜಾ ಸುದ್ದಿಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎಗೆ ಕೊಡಬೇಕೋ ಬೇಡವೋ ಎಂದು ಸಭೆ ನಡೆಸಿ ತೀರ್ಮಾನ;...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎಗೆ ಕೊಡಬೇಕೋ ಬೇಡವೋ ಎಂದು ಸಭೆ ನಡೆಸಿ ತೀರ್ಮಾನ; ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಇತ್ತೀಚೆಗೆ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೀರ್ಮಾನ ಮಾಡುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೇಳಿಕೆ ನೀಡಿರುವ ಗೃಹ ಸಚಿವರು,
ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದ್ದು, ಪತ್ರದ ಬಗ್ಗೆ ಸಭೆ ನಡೆಸಿ ಎನ್ ಐಎಗೆ ಪ್ರಕರಣದ ತನಿಖೆಯನ್ನು ನೀಡಬೇಕೋ ಬೇಡವೋ ಎಂದು ನಿರ್ಧಾರ ಮಾಡುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳಕ್ಕೆ ಯಾರು ರೆಫರ್ ಮಾಡಿದ್ದಾರೆ ಅಂತಾ ಗೊತ್ತಿಲ್ಲ, ಅವರು ಪ್ರಕರಣವನ್ನು ವರ್ಗಾಯಿಸುವಂತೆ ಕೇಳಿದ್ದಾರೆ, ಆದರೆ ಯಾವ ಆಧಾರದ ಮೇಲೆ ವರ್ಗಾವಣೆಗೆ ಕೇಳಿದ್ದಾರೆ ಅಂತ ಗೊತ್ತಿಲ್ಲ ಎಂದೂ ಡಾ. ಪರಮೇಶ್ವರ್ ಹೇಳಿದ್ದಾರೆ.

ಇದೇ ವೇಳೆ, ಪ್ರಕರಣದಲ್ಲಿ ಪೊಲೀಸ್ ತಂಡ ಕೂಡಾ ಸಮರ್ಥವಾಗಿ ತನಿಖೆ ಮಾಡುತ್ತಿದೆ ಎಂದೂ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

- Advertisement -

Latest News

error: Content is protected !!