Tuesday, May 14, 2024
Homeಅಪರಾಧಮಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚೆ: ಗೃಹ ಸಚಿವ...

ಮಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚೆ: ಗೃಹ ಸಚಿವ ಆರಗ ಜ್ಞಾನೇಂದ್ರ

spot_img
- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆ ವಿಚಾರವಾಗಿ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಚರ್ಚೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ಗೃಹ ಸಚಿವರು, ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರರಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಕರೆತರುವ ವ್ಯವಸ್ಥೆಯಾಗುತ್ತಿದೆ ಎಂದು ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಾರೆ.

ಅಲ್ಲದೇ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ರಾಜ್ಯದಿಂದ ನೇಮಕ ಮಾಡಿದ್ದೇವೆ, ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ, ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!