Saturday, June 6, 2026
Homeತಾಜಾ ಸುದ್ದಿರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

- Advertisement -
- Advertisement -

ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ, ಇದೀಗ ಸೂಪರ್ ಸ್ಟಾರ್ ರಜನಿಕಾಂತ್‍ರನ್ನು ರಾಜ್ಯಪಾಲರನ್ನಾಗಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಹಿಂದೆ ಹಲವು ಬಾರಿ ರಾಜಕೀಯಕ್ಕೆ ಬರುವ ಸುಳಿವು ಕೊಟ್ಟಿದ್ದ ರಜನಿಕಾಂತ್ ಕಡೆ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಮೊನ್ನೆ ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವರನ್ನು ಭೇಟಿ ಮಾಡಿದ್ರು. ಇದಕ್ಕೂ ಮುನ್ನ, ತಮಿಳುನಾಡು ರಾಜ್ಯಪಾಲರನ್ನು ರಜನಿಕಾಂತ್ ಭೇಟಿ ಮಾಡಿದ್ದರು. 

ತಮಿಳುನಾಡು ರಾಜ್ಯಪಾಲರೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇನೆ ಎಂದು ರಜನಿಕಾಂತ್ ಬಹಿರಂಗ ಹೇಳಿಕೆ ನೀಡಿದ ಬಳಿಕ ಈ ವಿಷಯ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಾಜ್ಯಪಾಲರು ಸಂವಿಧಾನದ ರಕ್ಷಕರಾಗಿದ್ದು, ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಮತ್ತು ಎಡಪಕ್ಷಗಳು ರಜನಿಕಾಂತ್ ಅವರನ್ನು ಟೀಕಿಸಿವೆ.

- Advertisement -

Latest News

error: Content is protected !!