Saturday, June 6, 2026
Homeತಾಜಾ ಸುದ್ದಿರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

- Advertisement -
- Advertisement -

ಬೆಂಗಳೂರು: ರಾಮಲಿಂಗಾ ರೆಡ್ಡಿ ರಾಜೀನಾಮೆಗೆ ಸಂಬಂಧಪಟ್ಟಂತೆ ಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ ಎಂದು ಹೇಳಿದ್ದಾರೆ.

“ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ” ಎಂದಿದ್ದಾರೆ.

“ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ” ಎಂದಿದ್ದಾರೆ. ಕೆಲವು ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, “ಏನೇ ಇದ್ದರು ಶಿಸ್ತು ಬಹಳ ಮುಖ್ಯ” ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ” ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!