- Advertisement -
![]()
- Advertisement -
ಮಂಗಳೂರು: ಶಾಲೆಗಳಲ್ಲಿ ಭಗವದ್ಗೀತೆ ಕಲಿಸಿದ್ರೆ ಸ್ವಾಗತಿಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ, ನಾನು ಹಿಂದುತ್ವದಲ್ಲಿ ನಂಬಿಕೆ ಇಟ್ಟುಕೊಂಡವನು ಎಂದು ಹೇಳಿದ್ದಾರೆ.
ನೈತಿಕ ವಿಚಾರವನ್ನು ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ, ಆದರೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು ಎಂದಿರುವ ಸಿದ್ಧರಾಮಯ್ಯ, ನಾನು ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಗುಜರಾತ್ ರಾಜ್ಯದಲ್ಲಿ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಚಿಂತನೆ ಬಳಿಕ ರಾಜ್ಯದಲ್ಲಿ ಕೂಡಾ ಸಿಎಂ ಚರ್ಚಿಸಿ ತೀರ್ಮಾನಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿನ್ನೆ ಹೇಳಿಕೆ ನೀಡಿದ್ದರು.
ರಾಜ್ಯದಲ್ಲಿ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುವ ಬಗ್ಗೆ ಪರ ಮತ್ತು ವಿರೋಧಾಭಿಪ್ರಾಯಗಳು ವ್ಯಕ್ತವಾಗಿವೆ.
- Advertisement -


