Friday, October 11, 2024
Homeಉದ್ಯಮಕೂಡಲೇ ವೈನ್ಸ್ ಶಾಪ್ ಓಪನ್ ಮಾಡುವಂತೆ ಹೈಕೋರ್ಟ್ ಗೆ ಅರ್ಜಿ

ಕೂಡಲೇ ವೈನ್ಸ್ ಶಾಪ್ ಓಪನ್ ಮಾಡುವಂತೆ ಹೈಕೋರ್ಟ್ ಗೆ ಅರ್ಜಿ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿಗಿಂತ, ಮದ್ಯ ಸಿಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮದ್ಯ ವ್ಯಸನಿಗಳು ದಿನೇ ದಿನೇ ಕಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಓಪನ್ ಮಾಡುವಂತೆ ಸೂಚಿಸಬೇಕು ಎಂಬುದಾಗಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ರಾಜ್ಯದಲ್ಲಿ ಲಾಕ್ ಡೌನ್ ನಂತ್ರ, ಮದ್ಯ ವ್ಯಸನಿಗಳಿಗೆ ಮದ್ಯ ದೊರೆಯುತ್ತಿಲ್ಲ. ಎಲ್ಲೆಡೆ ಮದ್ಯದ ಅಂಗಡಿಗಳು ಬಂದ್ ಆಗಿರುವ ಪರಿಣಾಮ, ಮದ್ಯ ಸಿಗದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇದೇ ಕಿನ್ನತೆಯಲ್ಲಿ ಬಳಲುತ್ತಿದ್ದ ರಾಜ್ಯದ ಹಲವರು ಈಗಾಗಲೇ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾರೆ. ಕೊರೊನಾ ಸೋಂಕಿನಿಂದ ಬಲಿಯಾದವರು ರಾಜ್ಯದಲ್ಲಿ 4 ಜನರು ಆದ್ರೇ.. ಎಣ್ಣೆ ಸಿಗದೇ ಆತ್ಮಹತ್ಯೆ ಮಾಡಿಕೊಂಡವರು ಹೆಚ್ಚಾಗಿದೆ.

ಈ ಹಿನ್ನಲೆಯಲ್ಲಿ ಹೈಕೋರ್ಟ್ ಗೆ ಡಾ.ವಿನೋದ್ ಕುಲಕರ್ಣಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್ ನಂತ್ರ ಮದ್ಯ ಸಿಗ್ತಾ ಇಲ್ಲ. ಇದರಿಂದಾಗಿ ಕಿನ್ನತೆಗೆ ಒಳಗಾಗಿ ಅನೇಕ ಮದ್ಯ ವ್ಯಸನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ವೈನ್ ಶಾಪ್ ಓಪನ್ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ಅರ್ಜಿಯಲ್ಲಿ ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ. ಇವರ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸುತ್ತಾ..? ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

- Advertisement -
spot_img

Latest News

error: Content is protected !!