Friday, June 14, 2024
Homeಕರಾವಳಿಉಡುಪಿಮಧ್ಯಾಹ್ನದವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ: ಶಾಸಕ ರಘುಪತಿ ಭಟ್

ಮಧ್ಯಾಹ್ನದವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ: ಶಾಸಕ ರಘುಪತಿ ಭಟ್

spot_img
- Advertisement -
- Advertisement -

ಉಡುಪಿ, ಮೇ 3: ಉಡುಪಿ ಜಿಲ್ಲೆಗೆ ವೈನ್ ಶಾಪ್, ಮದ್ಯದಂಗಡಿ ಮುಖ್ಯ ಅಲ್ಲ, ಅದಕ್ಕಿಂತ ಜಿಲ್ಲೆಯ ಜನರ ಆರೋಗ್ಯ ನಮಗೆ ಮುಖ್ಯ. ಹಾಗಾಗಿ ಉಡುಪಿಯಲ್ಲಿ ಮಧ್ಯಾಹ್ನದ ತನಕ ಮಾತ್ರ ಬಾರ್ ಗಳು ತೆರೆದಿರಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಕೊರೊನಾ ವೈರಸ್ ಹಾಗೂ ಲಾಕ್ ಡೌನ್ ಹಿನ್ನೆಲೆ ಮಾರ್ಚ್ 24 ರಿಂದ ಮದ್ಯ ಮಾರಾಟವನ್ನು ಬಂದ್ ಮಾಡಲಾಗಿತ್ತು. ನಾಳೆಯಿಂದ ರಾಜ್ಯಾದ್ಯಂತ ಬಾರ್ ಗಳನ್ನು ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.

ಆದರೆ ನಮ್ಮ ಜಿಲ್ಲೆಯಲ್ಲಿ ಮದ್ಯವನ್ನು ಸಂಜೆಯ ತನಕ ಮಾರಾಟ ಮಾಡುವುದಿಲ್ಲ ಎಂದಿರುವ ಶಾಸಕರು, ವೈನ್ ಶಾಪ್, ಎಂಎಸ್‌ಐಎಲ್ ಗಳನ್ನು ಮಧ್ಯಾಹ್ನದವರೆಗೆ ಮಾತ್ರ ತೆರೆಯುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಬ್ಯೂಟಿ ಪಾರ್ಲರ್ ಮತ್ತು ಸಲೂನ್ ಗಳನ್ನು ಒಂದು ವಾರ ಓಪನ್ ಮಾಡುವುದಿಲ್ಲವೆಂದರು.
ಸಲೂನ್ ತೆರೆಯಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಅವಕಾಶ ಇದೆ. ಹಾಗಿದ್ದರೂ ಜನರ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಹೇಳಿದರು.

ಲಾಕ್ ಡೌನ್ ಮುಗಿಯುವ ತನಕ ಉಡುಪಿ ಜಿಲ್ಲೆಯಲ್ಲಿ ಯಾವುದೇ ಡೆಂಟಲ್ ಕ್ಲಿನಿಕ್ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

- Advertisement -
spot_img

Latest News

error: Content is protected !!