Sunday, April 28, 2024
Homeತಾಜಾ ಸುದ್ದಿಬೆಳ್ತಂಗಡಿ: ಗ್ರಾ.ಪಂ.ಸದಸ್ಯರ ಅಧಿಕಾರ ಮೊಟಕುಗೊಳಿಸುವ ತಿದ್ದುಪಡಿ ವಾಪಸ್ ಪಡೆಯಿರಿ: ರಕ್ಷಿತ್ ಶಿವರಾಂ ಒತ್ತಾಯ

ಬೆಳ್ತಂಗಡಿ: ಗ್ರಾ.ಪಂ.ಸದಸ್ಯರ ಅಧಿಕಾರ ಮೊಟಕುಗೊಳಿಸುವ ತಿದ್ದುಪಡಿ ವಾಪಸ್ ಪಡೆಯಿರಿ: ರಕ್ಷಿತ್ ಶಿವರಾಂ ಒತ್ತಾಯ

spot_img
- Advertisement -
- Advertisement -

ಬೆಳ್ತಂಗಡಿ: ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70 ರವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಗ್ರಾಮ ಪಂಚಾಯತ್ ಅಧ್ಯಕ್ಷರುಗಳ ಅಧಿಕಾರವನ್ನು ಕಿತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ.  ಅಧಿಕಾರಿಗಳ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ನಿಯಂತ್ರಿಸುವ ಪ್ರಯತ್ನದ ಫಲ ಈ ಅಧಿಸೂಚನೆಯಾಗಿದೆ.

ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಮೊಟಕುಗೊಳಿಸುವ ಸರ್ಕಾರದ ಈ  ನಿರ್ಧಾರ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿಪ್ರಾಯ ಪಟ್ಟಿದ್ದಾರೆ.

ಗ್ರಾಮ ಪಂಚಾಯಿತಿಗಳು ಹಳ್ಳಿಗಳ ಸರ್ಕಾರ ಇದ್ದಂತೆ. ಅಧಿಕಾರ ವಿಕೇಂದ್ರೀಕರಣ ಮಾಡಿ ಗ್ರಾಮ ಸ್ವರಾಜ್ಯಕ್ಕೆ ನಾಂದಿ ಹಾಡಿದ ಮೊದಲ ರಾಜ್ಯ ಕರ್ನಾಟಕ. ಆದರೆ, ಈಗ  ಸರ್ಕಾರ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯಯಲ್ಲಿ  ತಿದ್ದುಪಡಿ ತಂದು ಚುನಾಯಿತ ಪ್ರತಿನಿಧಿಗಳ ಕರ್ತವ್ಯದಲ್ಲಿ ಅಧಿಕಾರಶಾಹಿ ಹಸ್ತಕ್ಷೇಪ ಮಾಡುವ  ಪ್ರಯತ್ನಕ್ಕೆ ಸರ್ಕಾರ  ದಾರಿ ಮಾಡಿಕೊಡುತ್ತಿದೆ. ಇದರಿಂದಾಗಿ ಗ್ರಾಮ ಪಂಚಾಯತ್ ಗಳು ಭ್ರಷ್ಟಾಚಾರದ ಕೊಂಪೆಯಾಗುವ ಸಾಧ್ಯತೆಯೊಂದಿಗೆ , ಜನಪ್ರತಿನಿಧಿಗಳು ಹಲ್ಲು ಕಿತ್ತ ಹಾವಿನಂತಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು ತಕ್ಷಣ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಮೊಟಕುಗೊಳಿಸುವ ವಿವಾದಾತ್ಮಕ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!