Thursday, June 4, 2026
Homeಕರಾವಳಿಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ  ಎ.7ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನಿನ್ನೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಜೆ ವೇಳೆ ಧಾರಕಾರ ಮಳೆಯಾಗಿದೆ.ಕುಕ್ಕೆ ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಐನೆಕಿದು, ಕಲ್ಮಕಾರು, ಯೇನೆಕಲ್ಲು, ಸಂಪಾಜೆ ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಸಾಧಾರಣದಿಂದ ಧಾರಕಾರ ಮಳೆಯಾಯಿತು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆ ಹಲವೆಡೆ ಗುಡುಗು ಆರಂಭಗೊಂಡು ಬಳಿಕ ಮಳೆಯಾಗಿದೆ.

ನಿನ್ನೆ ಸುರಿದ ಮಳೆ ಬಿಸಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಮಂದಿಗೆ ಕೊಂಚ ತಂಪೆರಿದಿದೆ.

- Advertisement -

Latest News

error: Content is protected !!