Monday, June 8, 2026
Homeಕರಾವಳಿಮಂಗಳೂರುಉಡುಪಿ; ಮಲ್ಪೆಯಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

ಉಡುಪಿ; ಮಲ್ಪೆಯಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

- Advertisement -
- Advertisement -

ಉಡುಪಿ; ಮಲ್ಪೆಯಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪ ಎಸಗಿದ ಆರೋಪದಡಿ ಮಲ್ಪೆ ಠಾಣೆಯ ಹೆಡ್‌ ಕಾನ್ಸ್ ಟೇಬಲ್ ಸುರೇಶ್‌ ಹಾಗೂ ಕಾನ್‌ಸ್ಟೇಬಲ್‌ ನಾಗರಾಜ್‌ ಅವರನ್ನು ಅಮಾನತು ಮಾಡಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ  ಅರೆಸ್ಟ್ ಆಗಿರುವ  ಲೀಲಾ , ಪಾರ್ವತಿ, ಲಕ್ಷ್ಮೀಬಾಯಿ, ಸುಂದರ್‌, ಮತ್ತು ಶಿಲ್ಪಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಐದು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಈ ಪ್ರಕರಣವನ್ನು ರಾಜೀ ಸಂಧಾನದಲ್ಲಿ ಮುಗಿಸಲು ಪ್ರಯತ್ನ ನಡೆಯುತ್ತಿರುವ ಕುರಿತು ವರದಿಯಾಗಿದೆ. ಆದರೆ ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಮಾಡಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳಾ ಆಯೋಗ ಕೂಡಾ ಎಂಟ್ರಿ ನೀಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ ನೀಡಲಾಗಿರುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸಲು ತಿಳಿಸಿದೆ.

- Advertisement -

Latest News

error: Content is protected !!