- Advertisement -
- Advertisement -
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಕಿನ್ನಿಗೋಳಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದೆ.
ಸಾಲಿಯಾ ಅವರು ಕಿನ್ನಿಗೋಳಿ ಬಸ್ ನಿಲ್ದಾಣದಿಂದ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ರಸ್ತೆ ದಾಟುತ್ತಿದ್ದ ವೇಳೆ, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಾಯಗೊಂಡ ಸಾಲಿಯಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


