Wednesday, November 11, 2026
Homeಕರಾವಳಿಕಾರು ಹಿಂದಕ್ಕೆ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಮಹಿಳೆ ದುರ್ಮರಣ

ಕಾರು ಹಿಂದಕ್ಕೆ ತೆಗೆಯುವ ವೇಳೆ ಚಕ್ರಕ್ಕೆ ಸಿಲುಕಿ ಮಹಿಳೆ ದುರ್ಮರಣ

- Advertisement -
- Advertisement -

ಸುಳ್ಯ: ತಾಲೂಕಿನ ಕಸಬಾ ಗ್ರಾಮದ ದುಗಲಡ್ಕದಲ್ಲಿ ಕಾರನ್ನು ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ (ನ.11) ನಡೆದಿದೆ.

ಮೃತರನ್ನು ಕಮಾರುನ್ನಿಸಾ (46) ಎಂದು ಗುರುತಿಸಲಾಗಿದೆ. ಅವರು ರಬ್ಬರ್ ಮೂರ್ತೆ ಕೆಲಸಕ್ಕೆ ತೆರಳಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!