Monday, June 29, 2026
Homeಇತರವಿಟ್ಲ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್...! ಮಹಿಳೆ ಸಾವು..!

ವಿಟ್ಲ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್…! ಮಹಿಳೆ ಸಾವು..!

- Advertisement -
- Advertisement -

ವಿಟ್ಲ: ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮದ್ಯ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿನ ಪುಣಚ ಬೈಲುಗುತ್ತು ನಿವಾಸಿ ವನಿತಾ (50) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ವನಿತಾ ಅವರು ತಮ್ಮ ಪುತ್ರನ ಜತೆಗೆ ಚಿಕಿತ್ಸೆಗಾಗಿ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.

ಏಕಾಏಕಿ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲಿ ಮಗುಚಿ ಬಿದ್ದಿದ್ದು. ಇದರಿಂದ ಮಹಿಳೆಯ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ತಕ್ಷಣವೇ ಅವರನ್ನು ಅಟೋ ರಿಕ್ಷಾ ಮೂಲಕ ವಿಟ್ಲ ಆಸ್ಪತ್ರೆಗೆ ದಾಖಲಿಸಲಾಯಿತು.

ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ಇನ್ನಷ್ಟು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದ್ದು ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!