- Advertisement -
- Advertisement -
ಕಾರ್ಕಳ: ಬಟ್ಟೆ ಒಣಗಿಸಲು ಹೋಗಿ ಮಹಿಳೆಯೊಬ್ಬರು 5 ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಮಲ ಪ್ರಿಯಾ ಬಿ (48) ಎಂದು ಗುರುತಿಸಲಾಗಿದೆ.
ಇವರು ಕಳೆದ 10 ವರ್ಷದಿಂದ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿ ಗೃಹದ ಎ ಬ್ಲಾಕ್ ನ 5 ನೇ ಮಹಡಿಯಲ್ಲಿ ವಾಸಿಸುತ್ತಿದ್ದು, ನವೆಂಬರ್ 24 ರಂದು ತಾವು ವಾಸ್ತವ್ಯವಿದ್ದ ಮನೆಯ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ನ.26 ರಂದು ಮೃತಪಟ್ಟಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -