Friday, June 5, 2026
Homeಕರಾವಳಿಕಾಡಾನೆ ದಾಳಿಗೆ ನಿವೃತ್ತ ಎಡಿಜಿಪಿ ಅವರ ಪತ್ನಿ ಸಾವು

ಕಾಡಾನೆ ದಾಳಿಗೆ ನಿವೃತ್ತ ಎಡಿಜಿಪಿ ಅವರ ಪತ್ನಿ ಸಾವು

- Advertisement -
- Advertisement -

ಮಡಿಕೇರಿ ಸಮೀಪದ ತಿತಿಮತಿಯ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಮೃತಪಟ್ಟವರು.

ಅವರು ಇಂದು ಬೆಳಿಗ್ಗೆ ತಮ್ಮ ತೋಟದಲ್ಲಿ ಸುತ್ತಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಗೋಣಿಕೊಪ್ಪಲು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿಯ ಸಮಯದಲ್ಲಿ ತೋಟದಲ್ಲಿದ್ದ ಕೆಲವು ಕಾರ್ಮಿಕರು ಸಮಯಪ್ರಜ್ಞೆಯಿಂದ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!