Monday, June 15, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕಲ್ಮಂಜದಲ್ಲಿ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಕಲ್ಮಂಜದಲ್ಲಿ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಜೂ.6 ರಂದು ಸಂಜೆ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS 74 ,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪ್ರಕರಣ ಬಗ್ಗೆ ತನಿಖೆ ನಡೆಸಿ ವಿವಿಧ ಆಯಾಮಗಳಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಜೂ‌.7 ರಂದು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಮುಂಡೇಲು ನಿವಾಸಿ ಎಮ್.ಡಿ.ಆಲಿ ಮಗನಾದ ಎಮ್.ಡಿ.ನಿಯಾಜ್(20) ಎಂಬಾತನನ್ನು ಕಕ್ಕಿಂಜೆಯಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಜೂ.7 ರಂದು ಸಂಜೆ ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!