Wednesday, July 15, 2026
Homeಅಪರಾಧಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿಯೇ ಮಹಿಳೆ ಶವವಾಗಿ ಪತ್ತೆ

ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿಯೇ ಮಹಿಳೆ ಶವವಾಗಿ ಪತ್ತೆ

- Advertisement -
- Advertisement -

ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ.

ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಮನೆ ಪಡೆದು ವಾಸವಾಗಿದ್ದರು. ಎರಡು ದಿನಗಳಿಂದ ಮನೆ ಬಾಗಿಲು ತೆರೆದೇ ಇತ್ತು. ಮನೆಯ ಒಳಗೆ ಯಾರೂ ಇದ್ದಂತೆ ಕಾಣುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ಕರೆದರೂ ಯಾರೂ ಮಾತನಾಡುತ್ತಿರಲಿಲ್ಲ. ಇದರಿಂದ ಅನುಮಾನಗೊಂಡ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯೊಳಗೆ ಪರಿಶೀಲನೆ ನಡೆಸಿದಾಗ ಮಹಿಳೆ ಬೆತ್ತಲೆಯ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೇಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!