Wednesday, June 3, 2026
Homeಕರಾವಳಿಉಡುಪಿಕುಂದಾಪುರ;ಸ್ಕೂಟಿ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ನದಿಗೆ ಹಾರಿ ಮಹಿಳೆ ನಾಪತ್ತೆ

ಕುಂದಾಪುರ;ಸ್ಕೂಟಿ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ನದಿಗೆ ಹಾರಿ ಮಹಿಳೆ ನಾಪತ್ತೆ

- Advertisement -
- Advertisement -

ಕುಂದಾಪುರ;ಸ್ಕೂಟಿ ಮೇಲೆ ಡೆತ್ ನೋಟ್ ಬರೆದಿಟ್ಟು ಮಹಿಳೆ ನದಿಗೆ ಹಾರಿ ಮಹಿಳೆ ನಾಪತ್ತೆಯಾಗಿರುವ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದೆ.

ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ. ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್‌ (32)  ನಾಪತ್ತೆಯಾದ ಮಹಿಳೆ.

ಹೀನಾ ಕೌಸರ್‌  ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ನೆಲೆಸಿದ್ದು, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಬಂದವರು ಸ್ಕೂಟಿಯನ್ನು ಸೇತುವೆಯ ಮೇಲಿಟ್ಟು, ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿದೆ. ಅವರ ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿದೆ. ಸ್ಕೂಟಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ.

ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!