Wednesday, April 16, 2025
Homeಕರಾವಳಿಉಡುಪಿಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿತ

spot_img
- Advertisement -
- Advertisement -

ಉಡುಪಿ; ಮೀನು ಕದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.

ಬೋಟಿನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದಾಗ ಮಹಿಳೆ ಸಿಗಡಿ ಮೀನನ್ನು ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಮಹಿಳೆ  ಈ ಆರೋಪವನ್ನು ನಿರಾಕರಿಸಿದ್ದಾರೆ. ಇದರಿಂದ ಕೆರಳಿದ ಬೋಟ್ ನವರು ಸ್ಥಳದಲ್ಲಿದ್ದ ಮರಕ್ಕೆ ಕಟ್ಟಿ ಹಾಕಿ ಎರಡು ಏಟು ಕೊಟ್ಟಿದ್ದಾರೆ.

ಬಳಿಕ ಮಲ್ಪೆ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆ ತಂದು ವಿಚಾರಣೆ ನಡೆಸಿದ್ದಾರೆ. ಆಗ  ಮಹಿಳೆ ತಾನು ಕದ್ದಿರುವುದಾಗಿ ಒಪ್ಪಿಕೊಂಡು, ದಂಡ ಕಟ್ಟಿದ್ದಾಳೆ. ಬೋಟ್ ನ ಮಾಲೀಕರು ಮತ್ತು ಮಹಿಳೆಗೆ ಸಂಬಂಧಪಟ್ಟವರು ಕುಳಿತು ರಾಜಿ ಸಂಧಾನ ನಡೆಸಿ ಪ್ರಕರಣ ಮುಗಿಸಿದ್ದಾರೆ.ಆದರೆ ಘಟನೆಯ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ.

- Advertisement -
spot_img

Latest News

error: Content is protected !!