Thursday, September 3, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಉಪ್ಪಿನಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

- Advertisement -
- Advertisement -

ಉಪ್ಪಿನಂಗಡಿ: ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆಯಲ್ಲಿ 47 ವರ್ಷದ ಲಕ್ಷ್ಮೀ ಕೆ. ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮನೆಯ ಬೆಡ್‌ರೂಮ್‌ನ ಕಿಟಕಿಯ ಸರಳಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ವೈಯಕ್ತಿಕ ಕಾರಣಗಳಿಂದ ಮನನೊಂದು ತಾಯಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೃತರ ಪುತ್ರಿ ಪ್ರಕೃತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳು ಕಾಡುತ್ತಿದ್ದರೆ ನೆರವಿಗೆ ರಾಜ್ಯ ಆರೋಗ್ಯ ಇಲಾಖೆಯ ಹೆಲ್ಪ್‌ಲೈನ್ 104 ಅಥವಾ ಟೆಲಿ-ಮಾನಸ್ (Tele-MANAS) 14416 ಸಂಖ್ಯೆಯನ್ನು ಸಂಪರ್ಕಿಸಬಹುದು.

- Advertisement -

Latest News

error: Content is protected !!