ಕುಂದಾಪುರ; ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಸ್ಲಿಂ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ನೀಡುವ ವಿಚಾರಕ್ಕೆ ಹಲ್ಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಆ ಮಹಿಳೆ ಔಷಧ ಖರೀದಿಸಿ 500 ರೂ ಕೊಟ್ಟಿದ್ದರು. ಈ ವೇಳೆ ಚಿಲ್ಲರೆ ಇಲ್ಲ, ಕೊಡಿ ಎಂದು ಯುವತಿ ಹೇಳಿದ್ದಾರೆ. ಆದರೆ ಯಾಸ್ಮಿನ್ ಅದೇ ವಿಚಾರಕ್ಕೆ ಯುವತಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎನ್ನಲಾಗಿದೆ. ಹಲ್ಲೆಗೊಳಗಾದ ಲಕ್ಷ್ಮೀ ಅವರನ್ನು ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ . ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಪ್ರಕರಣದ ಸಂತ್ರಸ್ತ ಯುವತಿಯ ಆರೋಗ್ಯ ವಿಚಾರಿಸಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.


