Wednesday, June 24, 2026
Homeಕರಾವಳಿಮಂಗಳೂರುಸುಬ್ರಹ್ಮಣ್ಯ;  ಕುಮಾರಧಾರ ನದಿಯಲ್ಲಿ ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ  ಪತ್ತೆ

ಸುಬ್ರಹ್ಮಣ್ಯ;  ಕುಮಾರಧಾರ ನದಿಯಲ್ಲಿ ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ  ಪತ್ತೆ

- Advertisement -
- Advertisement -

ಸುಬ್ರಹ್ಮಣ್ಯ;  ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹ ಕುಮಾರಧಾರ ನದಿಯಲ್ಲಿ ಮೇ.11 ರ ಬೆಳಗ್ಗೆ ಪತ್ತೆಯಾಗಿದೆ.

ಗೀತಾ (51) ಮೃತ ಮಹಿಳೆ. ಗೀತಾ ಅವರು ಕಳೆದ  ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ‌. ಮೇ.11 ರ ಮುಂಜಾನೆ ಮೃತದೇಹ ಪತ್ತೆಯಾಗಿದೆ.

ನದಿಯಲ್ಲಿ  ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು   ಮಾಹಿತಿ ನೀಡಿದ ಹಿನ್ನೆಲೆಯಲ್ಲಿ   ಪೊಲೀಸರು ಸ್ಥಳಕ್ಕೆ ಆಗಮಿಸಿ  ಪರಿಶೀಲನೆ ನಡೆಸಿದ್ದರು. ಪೊಲೀಸರು ಮಾಹಿತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.

ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕೌಟುಂಬಿಕ ಕಲಹದಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!